ತುಮಕೂರು ತಾಲ್ಲೂಕಿನ ಪುರಾಣ ಪ್ರಸಿದ್ಧ ಸ್ಥಳಗಳಲ್ಲೊಂದಾದ ನಾಮದ ಚಿಲುಮೆಯಲ್ಲಿರುವ, ಅರಣ್ಯ ಇಲಾಖೆಗೆ ಸೇರಿದ "ಸಿದ್ಧ ಸಂಜೀವನಿ ಔಷಧಿ ಸಸ್ಯವನ" ಪ್ರಸ್ತುತ ಅರಣ್ಯ ಇಲಾಖೆಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದಿಂದ ಸಂಪೂರ್ಣವಾಗಿ ನಾಶವಾಗಿದೆ. ಈ ಬಗ್ಗೆ ನಾನು ರಾಜ್ಯಪಾಲರು, ಮುಖ್ಯಮಂತ್ರಿಗಳು ಮೊದಲಾದ ಗಣ್ಯರಿಗೆ ಮನವಿಪತ್ರ ಸಲ್ಲಿಸಿದ್ದು, ಆ ಕುರಿತ ವರದಿ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.